Menu

ಕೀರ್ತನೆಗಳು 67

IRV

1 ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ; ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. ಸೆಲಾ 2 ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು. 3 ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ. 4 ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ 5 ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ. 6 ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ. ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ; 7 ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.

Everything we make is available for free because of a generous community of supporters.

Donate