Menu

ಕೀರ್ತನೆಗಳು 97

IRV

1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ. 2 ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ . 3 ಬೆಂಕಿಯು ಆತನ ಮುಂದೆ ಹೋಗಿ, ಸುತ್ತಲೂ ಆವರಿಸಿ ಆತನ ವೈರಿಗಳನ್ನು ದಹಿಸಿಬಿಡುತ್ತದೆ. 4 ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು; ಭೂಮಿಯು ಅದನ್ನು ಕಂಡು ನಡುಗಿತು. 5 ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು. 6 ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು. 7 ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ. 8 ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ ಚೀಯೋನ್ ಪಟ್ಟಣವು ಹರ್ಷಿಸಿತು; ಯೆಹೂದ ಪ್ರಾಂತ್ಯದ ಊರುಗಳು ಸಂತೋಷಿಸಿದವು. 9 ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ. 10 ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು. 11 ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು , ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ. 12 ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.

Everything we make is available for free because of a generous community of supporters.

Donate