Menu

ಕೀರ್ತನೆಗಳು 128

OKCV

1 ಯೆಹೋವ ದೇವರಿಗೆ ಭಯಪಟ್ಟು ಅವರ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು. 2 ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಆಶೀರ್ವಾದವನ್ನೂ ಅಭಿವೃದ್ಧಿಯನ್ನೂ ಹೊಂದುವಿ. 3 ನಿನ್ನ ಹೆಂಡತಿಯು ನಿನ್ನ ಮನೆಯಲ್ಲಿರುವ ಫಲಭರಿತವಾದ ದ್ರಾಕ್ಷಿಬಳ್ಳಿಯ ಹಾಗೆ ಇರುವಳು. ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು, ಓಲಿವ್ ಮರಗಳ ಸಸಿಗಳ ಹಾಗೆ ಇರುವರು. 4 ಯೆಹೋವ ದೇವರಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವಾದ ಹೊಂದುವನು. 5 ಯೆಹೋವ ದೇವರು ನಿನ್ನನ್ನು ಚೀಯೋನಿನೊಳಗಿಂದ ನಿನ್ನ ಜೀವಮಾನವೆಲ್ಲಾ ಆಶೀರ್ವದಿಸಲಿ; ನೀನು ಯೆರೂಸಲೇಮಿನ ಸಮೃದ್ಧಿಯನ್ನು ಕಾಣುವಿ. 6 ನೀನು ಮಕ್ಕಳ ಮಕ್ಕಳನ್ನು ಕಾಣುವ ಬದುಕು ನಿನಗಿರಲಿ ಇಸ್ರಾಯೇಲರ ಮೇಲೆ ಸಮಾಧಾನವಿರಲಿ.

Everything we make is available for free because of a generous community of supporters.

Donate