Menu

ಕೀರ್ತನೆಗಳು 131

OKCV

1 ಯೆಹೋವ ದೇವರೇ, ನನ್ನ ಹೃದಯವು ಗರ್ವದ್ದಲ್ಲ, ನನಗೆ ಸೊಕ್ಕಿನ ಕಣ್ಣಿಲ್ಲ ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ ನಾನು ಕೈ ಹಾಕುವುದಿಲ್ಲ. 2 ಆದರೆ ಹಾಲುಬಿಡಿಸಿದ ಕೂಸು ತನ್ನ ತಾಯಿಯ ಮಡಿಲಲ್ಲಿರುವಂತೆ ನನ್ನ ಪ್ರಾಣವನ್ನು ಸಮಾಧಾನ ಪಡಿಸಿದ್ದೇನೆ. ನಾನು ತಾಯಿಯ ಮಡಿಲಲ್ಲಿರುವ ಕೂಸಿನಂತೆ ಸಂತೃಪ್ತಿಯಿಂದ ಇದ್ದೇನೆ. 3 ಇಸ್ರಾಯೇಲೇ, ಯೆಹೋವ ದೇವರಲ್ಲಿ ನಿನ್ನ ನಿರೀಕ್ಷೆಯನ್ನಿಡು. ಈಗಲೂ, ಎಂದೆಂದಿಗೂ ನಿರೀಕ್ಷೆಯಿಂದಿರು.

Everything we make is available for free because of a generous community of supporters.

Donate