Menu

ಕೀರ್ತನೆಗಳು 146

OKCV

1 ಯೆಹೋವ ದೇವರನ್ನು ಸ್ತುತಿಸಿರಿ. ನನ್ನ ಪ್ರಾಣವೇ, ಯೆಹೋವ ದೇವರನ್ನು ಸ್ತುತಿಸು. 2 ನಾನು ಬದುಕುವವರೆಗೂ ಯೆಹೋವ ದೇವರನ್ನು ಸ್ತುತಿಸುವೆನು; ನಾನು ಇರುವವರೆಗೂ ನನ್ನ ದೇವರನ್ನು ಸ್ತುತಿಸುವೆನು. 3 ಅಧಿಪತಿಗಳಲ್ಲಿಯೂ ರಕ್ಷಿಸಲಾಗದ ಮಾನವರಲ್ಲಿಯೂ ಭರವಸವಿಡಬೇಡಿರಿ. 4 ಅವರ ಶ್ವಾಸವು ಹೋಗಲು ಮಣ್ಣಿಗೆ ಸೇರುತ್ತಾರೆ, ಅದೇ ದಿವಸದಲ್ಲಿ ಅವರ ಆಲೋಚನೆಗಳೆಲ್ಲಾ ನಾಶವಾಗುತ್ತವೆ. 5 ಯಾಕೋಬನ ದೇವರನ್ನು ತಮ್ಮ ಸಹಾಯಕರಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಯೆಹೋವ ದೇವರ ಮೇಲೆ ನಿರೀಕ್ಷೆ ಇಡುವನು. 6 ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದ ದೇವರೇ ಎಂದೆಂದಿಗೂ ನಂಬಿಗಸ್ತರು. 7 ಅವರು ದಬ್ಬಾಳಿಕೆಯಾದ ನ್ಯಾಯತೀರಿಸುತ್ತಾರೆ, ಹಸಿದವರಿಗೆ ಆಹಾರವನ್ನು ಕೊಡುತ್ತಾರೆ. ಯೆಹೋವ ದೇವರು ಸೆರೆಯವರನ್ನು ಬಿಡಿಸುತ್ತಾರೆ. 8 ಯೆಹೋವ ದೇವರು ಕುರುಡರ ಕಣ್ಣುಗಳನ್ನು ತೆರೆಯುತ್ತಾರೆ. ಅವರು ದೀನರನ್ನು ಎತ್ತುತ್ತಾರೆ. ನೀತಿವಂತರನ್ನು ಪ್ರೀತಿಸುತ್ತಾರೆ. 9 ಯೆಹೋವ ದೇವರು ಪರದೇಶಸ್ಥರನ್ನು ಕಾಪಾಡುತ್ತಾರೆ. ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಉದ್ಧರಿಸುತ್ತಾರೆ. ಆದರೆ ದುಷ್ಟರ ಮಾರ್ಗವನ್ನು ಬೇಸರಪಡಿಸುತ್ತಾರೆ. 10 ಚೀಯೋನೇ, ನಿಮ್ಮ ದೇವರಾದ ಯೆಹೋವ ದೇವರು ತಲತಲಾಂತರಕ್ಕೂ, ಸರ್ವ ಸಂತತಿಗಳವರೆಗೂ ಆಳಿಕೆ ಮಾಡುತ್ತಾರೆ. ಯೆಹೋವ ದೇವರಿಗೆ ಸ್ತೋತ್ರ.

Everything we make is available for free because of a generous community of supporters.

Donate